ಶೀರ್ಷಿಕೆ – ಜೀವತಾಂಡವ
ಅಣು ಭೂತ ಭೂಗೋಳ ತಾರಾಂಬರಾದಿಗಳ ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ ಕುಣಿಸುತಿರುವನು ತನ್ನ ಕೃತಿಕಂತುಕವನದರೊಳಣಗಿರ್ದು ಪರಬೊಮ್ಮ – ಮಂಕುತಿಮ್ಮ|| 84 ||
ನಭದ ಬಯಲೊಳನಂತ, ಮನದ ಗುಹೆಯೊಳನಂತ ಉಭಯದಾ ನಡುವೆ ಸಾದ್ಯಂತ ಜೀವ ಕಥೆ ವಿಭುವೊಬ್ಬನೀ ಗಾಳಿಬುಡ್ಡೆಗಳನೂದುವನು ಹಬೆಗುಳ್ಳೆಯೋ ಸೃಷ್ಟಿ – ಮಂಕುತಿಮ್ಮ|| 85 ||
ಗಗನ ತಲೆನವಿರಾಗೆಪೆರೆ ತಾರೆಹೂವಾಗೆ ಜಗವೆಲ್ಲ ವಪುವಾಗೆ ಮಾಯೆ ಸತಿಯಾಗೆ| ನಗುನಗುವ ಬೊಬ್ಬಿಡುವ ಜೀವತಾಂಡವರಸಿಕ ಭಗವಂತ ಶಿವರುದ್ರ – ಮಂಕುತಿಮ್ಮ|| 86 ||
ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ ಬೆಳಕು ವೇಗಗಳೆನಿಪ ಕಾಲ ದಿಕ್ಕುಗಳ ಚಲನೆಯಲಿ ವಿಶ್ವಸಂಮೋಹನಗಳೆಲ್ಲವಾ ವಿಲಸಿತವು ಬೊಮ್ಮನದು – ಮಂಕುತಿಮ್ಮ|| 87 ||
ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ ಸಲೆ ಬಗೆಯಲದು ಪರಬ್ರಹ್ಮ ವಿಸ್ಫುರಣೆ ಥಳಥಳಿಕೆ ವಜ್ರದಲಿ ನೈಜವಿರುವಂತೆಯು ಜ್ವಲತೆ ಬೊಮ್ಮಗೆ ನೈಜ – ಮಂಕುತಿಮ್ಮ|| 88 ||